ಮೇ 14ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14 ರಂದು ಸಂಜೆ ಮೃತಪಟ್ಟಿದ್ದ ಮುಂಬೈನಿಂದ ಬಂದಿದ್ದ ಕುಂದಾಪುರ ಮೂಲದ 54 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಮುಂಬೈನಿಂದ ಕುಂದಾಪುರ ತಾಲ್ಲೂಕಿಗೆ ಬಂದಿರುವ ಈ ವ್ಯಕ್ತಿಗೆ ಮೇ 13ರಂದು ಹೃದಯಾಘಾತ ಸಂಭವಿಸಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೇ 14ರಂದು ಮೃತಪಟ್ಟಿದ್ದರು. ಆ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದ ಕಾರಣ ಐಸೋಲೇಷನ್ […]