ಉಡುಪಿಯಲ್ಲಿ ಇಂದು ಪೊಲೀಸ್, ಆರೋಗ್ಯ ಸಿಬ್ಬಂದಿ ಸಹಿತ 14 ಮಂದಿಗೆ ಕೊರೊನಾ ಸೋಂಕು ದೃಢ

ಉಡುಪಿ: ಪೊಲೀಸ್ ಹಾಗೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಸಹಿತ ಜಿಲ್ಲೆಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದಿನ ಸೋಂಕಿತರ ಪೈಕಿ ಎಂಟು ಮಂದಿ ಮುಂಬೈನಿಂದ ಬಂದವರಾಗಿದ್ದು, ಇಬ್ಬರ ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ‌ ನೀಡಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1077ಕ್ಕೆ ಏರಿಕೆ ಆಗಿದೆ. ಈವರೆಗೆ ಜಿಲ್ಲೆಯಲ್ಲಿ 961 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 114 ಸಕ್ರಿಯ ಸೋಂಕು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಉಡುಪಿಯಲ್ಲಿ ಇಂದು ಕೂಡ ಕೊರೊನಾ ಪ್ರಕರಣ ದಾಖಲಾಗಿಲ್ಲ: 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಉಡುಪಿ: ಜಿಲ್ಲೆಯಲ್ಲಿ ಇಂದು ಕೂಡ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಇದು ಜಿಲ್ಲೆಯ ಜನರಲ್ಲಿದ್ದ ಆತಂಕವನ್ನು ಸ್ವಲ್ಪ ಮಟ್ಟಿಗೆ ದೂರ ಮಾಡಿದೆ. ಜಿಲ್ಲೆಯಲ್ಲಿ ಇದುವರೆಗೆ 947 ಮಂದಿ ಸೋಂಕಿತರು ಪತ್ತೆಯಾಗಿದೆ. ಇಂದು 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 327 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ಜಿಲ್ಲೆಯಲ್ಲಿ 619 ಸಕ್ರಿಯ ಪ್ರಕರಣಗಳಿವೆ. ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಉಡುಪಿ: ಮುಂಬೈನಿಂದ ಬಂದ 7 ವರ್ಷದ ಬಾಲಕ ಸಹಿತ 13 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದ 7 ವರ್ಷದ ಬಾಲಕ ಸೇರಿದಂತೆ ಇಂದು ಹೊಸದಾಗಿ 13 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 902ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಡುಪಿಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು: ಜಿಲ್ಲೆಗೆ ಕಂಟಕವಾದ ಮಹಾರಾಷ್ಟ್ರದ ನಂಟು

ಉಡುಪಿ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಹೊಸ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಕೊರೊನಾ ಸೋಂಕಿತ ನಾಲ್ಕು ಮಂದಿ ಕೂಡ ಮುಂಬೈನಿಂದ ಜಿಲ್ಲೆಗೆ ಆಗಮಿಸಿದ್ದವರಾಗಿದ್ದಾರೆ . ಮಧ್ಯಾಹ್ನ ಬಿಡುಗಡೆಗೊಂಡ ರಾಜ್ಯ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದವರಾಗಿದ್ದಾರೆ. 24  ಯುವಕ, 24 ವರ್ಷದ ಯುವತಿ, 8 ವರ್ಷದ ಬಾಲಕ ಹಾಗೂ 38 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರೆಲ್ಲರನ್ನು ನಗರದ ಡಾ. ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಐಸೋಲೇಷನ್ […]

ಉಡುಪಿ: ದುಬೈನಿಂದ ಆಗಮಿಸಿದ ಐದು ಮಂದಿಯಲ್ಲಿ ಕೊರೊನಾ ಪಾಸಿಟಿವ್

ಉಡುಪಿ: ದುಬೈನಿಂದ ಜಿಲ್ಲೆಗೆ ಆಗಮಿಸಿದ ಐದು ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ವಿದೇಶದಲ್ಲಿ ಸಿಲುಕಿಕೊಂಡಿದ್ದ 176 ಮಂದಿ ಅನಿವಾಸಿಯ ಭಾರತೀಯರು ಮೇ 13ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಇವರಲ್ಲಿ ಉಡುಪಿ ಜಿಲ್ಲೆಗೆ ಸೇರಿದ 49 ಮಂದಿಯನ್ನು ಜಿಲ್ಲೆಯ ಹೋಟೆಲ್ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ನಂತರ ಎಲ್ಲರ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಐದು ಮಂದಿಯಲ್ಲಿ […]