ಉಡುಪಿ: ಇಂದು 927 ಮಂದಿಗೆ ಕೊರೊನಾ ಪಾಸಿಟಿವ್; ನಾಲ್ವರು ಮೃತ್ಯು
ಉಡುಪಿ: ಜಿಲ್ಲೆಯಲ್ಲಿ ಇಂದು 927 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ 332, ಕುಂದಾಪುರ ತಾಲೂಕಿನಲ್ಲಿ 325, ಕಾರ್ಕಳ ತಾಲೂಕಿನಲ್ಲಿ 267 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5851ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 4 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಕುಂದಾಪುರದ ಇಬ್ಬರು ಮಹಿಳೆಯರು ಸೋಂಕಿನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 306 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮೇ 23 ರಂದು ಜಿಲ್ಲೆಯಲ್ಲಿ […]