ಉಡುಪಿ: ಇಂದು 88 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮೂವರು ಕೊರೊನಾ ಸೋಂಕಿಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 88 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 1918 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 190 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಜಿಲ್ಲೆಯಲ್ಲಿ 1104 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಮೂವರು ಕೊರೊನಾದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 14 ಮಂದಿ ಕೊರೊನಾದಿಂದ ಮರಣ ಹೊಂದಿದ್ದಾರೆ ಎಂದು ಮಾಹಿತಿ ನೀಡಿದೆ.

ಉಡುಪಿಯಲ್ಲಿ ಇಂದು 53 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ಇಂದು ಕೂಡ 53 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1661 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.

ಉಡುಪಿಯಲ್ಲಿ ಇಂದು ಕೂಡ 34 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಮುಂದುವರಿದಿದ್ದು, ಇಂದು ಕೂಡ 34 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1477ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಡುಪಿಗೆ ಮತ್ತೆ ಮುಂಬೈ ಕಂಟಕ: ಇಂದು 27 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 27 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದಿನ ಪಾಸಿಟಿವ್ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ.

ಉಡುಪಿ: ಮುಂಬೈನಿಂದ ಬಂದಿರುವ 9 ವರ್ಷದ ಬಾಲಕಿ ಸಹಿತ ಮೂವರಿಗೆ ಕೊರೊನಾ ಪಾಸಿಟಿವ್ 

ಉಡುಪಿ: ಮುಂಬೈನಿಂದ ಉಡುಪಿ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ ಸೇರಿದಂತೆ ಜಿಲ್ಲೆಯಲ್ಲಿ ಇಂದು ಮೂರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯ ಕುಟುಂಬ ಹಾಗೂ ಆರೋಗ್ಯ ಇಲಾಖೆ ಮಧ್ಯಾಹ್ನ ಬಿಡುಗಡೆಗೊಳಿಸಿದ ಕೊರೊನಾ ಬುಲೆಟಿನ್ ನಲ್ಲಿ ಮಾಹಿತಿ ತಿಳಿದುಬಂದಿದೆ. ಮುಂಬೈನಿಂದ ಜಿಲ್ಲೆಗೆ ಬಂದಿರುವ 9 ವರ್ಷದ ಬಾಲಕಿ, 27 ವರ್ಷದ ಯುವಕ ಹಾಗೂ 30 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.