ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ “ಆಶಾ ನಿಲಯ” ವಿಶೇಷ ಚೇತನ ಮಕ್ಕಳ ಶಾಲೆಗೆ ಭೇಟಿ

ಬಂಟಕಲ್:ಬಂಟಕಲ್ ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ “ಆಸರೆ” ಸಮಾಲೋಚನ ಘಟಕದ ವತಿಯಿಂದ ಉಡುಪಿಯ “ಆಶಾನಿಲಯ” ವಿಶೇಷ ಚೇತನ ಮಕ್ಕಳ ಶಾಲೆಗೆ ದಿನಾಂಕ 30 ನವೆಂಬರ್ 2024 ರಂದು ಭೇಟಿ ನೀಡಿದರು. ಈ ಭೇಟಿಯಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ವಿದ್ಯಾರ್ಥಿಗಳು ಭಾಗವಹಿಸಿ ವಿಶೇಷಚೇತನ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಎದುರಿಸುತ್ತಿರುವ ಸವಾಲುಗಳು ಮತ್ತು ಸಮಸ್ಯೆಗಳನ್ನು ತಿಳಿದುಕೊಂಡರು. ಆಶಾ ನಿಲಯದ ಮಕ್ಕಳಿಗಾಗಿ ವಿದ್ಯಾರ್ಥಿಗಳು ನೃತ್ಯ, ಸಂಗೀತ ಮುಂತಾದ ಮನೋರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ಮಕ್ಕಳನ್ನು ರಂಜಿಸಿದರು. ಈ […]