ಉಡುಪಿ: ದೇಶದೆಲ್ಲಡೆ ಗ್ರಂಥಾಲಯ ಆಂದೋಲನವಾಗಲಿ: ಡಾ. ಮಹಾಬಲೇಶ್ವರ ರಾವ್
ಉಡುಪಿ: ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ ಎಂದು ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮನೆಯೇ ಗ್ರಂಥಾಲಯ ಯೋಜನೆಯಡಿ 130ನೇ ಗ್ರಂಥಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಬಸ್, ರೈಲು, ವಿಮಾನ ನಿಲ್ದಾಣ, ಆಸ್ಪತ್ರೆ ಸಹಿತ ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ವಿರಾಮ ಸಿಕ್ಕಾಗ ಓದಲು ಪುಸ್ತಕ ಭಂಡಾರ/ಗ್ರಂಥಾಲಯ ನಿರ್ಮಾಣವನ್ನು […]