ಉಡುಪಿ: ಕೌಂಟುಬಿಕ ಕಲಹ; ಕಾರ್ಮಿಕ ನೇಣಿಗೆ ಶರಣು

ಉಡುಪಿ: ವಲಸೆ ಕಾರ್ಮಿಕರೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹನುಮಂತ ನಗರದಲ್ಲಿ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದ ವಿನೋದ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ವಿಜಯಪುರದ ನಿವಾಸಿ ಎಂದು ತಿಳಿದು ಬಂದಿದ್ದು, ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೌಂಟುಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ರಾಜೇಶ್ ಬಿ. […]