ಉಡುಪಿ: ಕೆಮ್ಮು, ಶೀತ, ಜ್ವರ ಲಕ್ಷಣವಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-ಡಿಸಿ
ಉಡುಪಿ: ಶೀತ, ಕೆಮ್ಮು, ಜ್ವರ ಹಾಗೂ ಐ.ಎಲ್.ಐ ಚಿಕಿತ್ಸೆಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗಳನ್ನು ಮಾಡಿಸಬೇಕು. ತಪ್ಪಿದ್ದಲ್ಲಿ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ನೊಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಾ ಪ್ರಾಧಿಕಾರದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜನರು ಕೋವಿಡ್ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದಾಗಿ […]