ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮತ್ತು ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸ್ವಾತಂತ್ರ್ಯದ ಕನಸುಗಾರರು ಸ್ವಾತಂತ್ರ್ಯವ ನಮಗೆ ಧಾರೆಯನೆರೆದರು. ಅದನ್ನು ನಾವು ಉಳಿಸೋಣ. ಉಳಿಸಿ ಮುಂದಕ್ಕೆ ಬೆಳೆಸೋಣ ಎಂಬ ಸಂದೇಶವನ್ನು ನೀಡಿದರು. ದೇಶಕ್ಕಾಗಿ ಬದುಕುವ ಮೂಲಕ ನಮ್ಮ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಗೌರವಿಸಬೇಕು. ನಮ್ಮ ದೇಶವನ್ನು ನಮ್ಮ ತಾಯಿ ಎಂದು ಗೌರವಿಸಿ ಎಂಬ […]