ಉಡುಪಿ: ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್)ಯ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕ ಉದ್ಘಾಟನೆ

ಉಡುಪಿ: ಇಂದು ಮಹಿಳೆಯರಲ್ಲಿ ಬೇರೆ ಎಲ್ಲ ಕ್ಯಾನ್ಸರ್‌ಗಿಂತ ಸ್ತನ ಕ್ಯಾನ್ಸರ್‌ಗಳೇ ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಮಹಿಳೆಯರು ಇದರ ಬಗ್ಗೆ ನಿರ್ಲಕ್ಷ್ಯ ಮಾಡದೇ ಒಂದು ಅಥವಾ ಎರಡು ವರ್ಷಗಳಿಗೊಮ್ಮೆ ತಪಾಸಣೆಗೆ ಒಳಪಡಿಸಿಕೊಳ್ಳಬೇಕು ಎಂದು ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಸುಶೀಲ್ ಜತ್ತನ್ನ ಹೇಳಿದರು. ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆ (ಮಿಷನ್ ಆಸ್ಪತ್ರೆ)ಯಲ್ಲಿ ಸಭಾಂಗಣದಲ್ಲಿ ಶನಿವಾರ ನಡೆದ ಸ್ತನ ಕ್ಯಾನ್ಸರ್ ಪರೀಕ್ಷಾ ಘಟಕದ (ಮ್ಯಾಮೋಗ್ರಫಿ ಯುನಿಟ್) ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕೇಂದ್ರವನ್ನು […]