ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಸಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬಹೃತ್ ವಿದ್ಯುತ್ ಸ್ಥಾವರ ಇದ್ದರೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಮಾರ್ಚ್ ತಿಂಗಳೊಳಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರೊಂದಿಗೆ ಮಾತುಕತೆ ನಡೆಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ದಿನದ 24 ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಬೇಡಿಕೆ ಸಲ್ಲಿಸಲಿದೆ ಎಂದು ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಶೆಟ್ಟಿ ತಿಳಿಸಿದರು. […]