ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸ್ಥಳೀಯ ಕುಚ್ಚಲಕ್ಕಿ ಪಡಿತರವಾಗಿ ನೀಡಿ: ಸಚಿವರಾದ ಕೋಟ, ಅಂಗಾರರಿಂದ ಸಿಎಂಗೆ ಮನವಿ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚ್ಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಹಾಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪಡಿತರದಾರರಿಗೆ ಬೇಕಾಗುವ ಕುಚ್ಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ವಿತರಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ […]