ಉಡುಪಿ ಕಾಂಗ್ರೆಸ್ ನಾಯಕರಿಂದ ದಲಿತರ ನಿರ್ಲಕ್ಷ್ಯ ಆರೋಪ; ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ “ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ” ಪ್ರತಿಭಟನೆ
ಉಡುಪಿ: ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರದ ಗಮನ ಸೆಳೆಯುವಲ್ಲಿ ಉಡುಪಿ ಕಾಂಗ್ರೆಸ್ ನಾಯಕರು ವಿಫಲವಾಗಿದ್ದಾರೆ ಆರೋಪಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ‘ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ’ ಹೆಸರಿನಡಿ ವಿಶಿಷ್ಟ ಪ್ರತಿಭಟನೆಯನ್ನು ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆಸಲಾಯಿತು. ಸಂವಿಧಾನದ ಪರ, ದಲಿತರ ರಕ್ಷಕರು ಎಂದು ಹೇಳಿಕೊಂಡು ಓಟು ಪಡೆಯುವ “ಉಡುಪಿ ಕಾಂಗ್ರೆಸ್ ಪಕ್ಷವು ಕಳೆದ ಹಲವು ದಶಕಗಳಿಂದ ಉಡುಪಿ ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುವ ಅನ್ಯಾಯ, […]