ಉಡುಪಿ: ದಲಿತರ ಭೂಮಿ, ವಸತಿ ಹಕ್ಕಿಗಾಗಿ ಆಗ್ರಹಿಸಿ ದಸಂಸ ಧರಣಿ

ಉಡುಪಿ: ದಲಿತರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಏಳು ತಾಲೂಕು ಕಚೇರಿಗಳ ಮುಂದೆ ಶುಕ್ರವಾರ ಏಕಕಾಲದಲ್ಲಿ ಧರಣಿ ನಡೆಸಲಾಯಿತು. ಉಡುಪಿ ತಾಲೂಕು ಕಚೇರಿ ಮುಂಭಾಗದಲ್ಲಿ ಜಮಾಯಿಸಿದ್ದ ನೂರಾರು ಧರಣಿನಿರತರು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಧರಣಿ ಉದ್ದೇಶಿಸಿ ಮಾತನಾಡಿದ ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಅವರು, ಲಕ್ಷಾಂತರ ಎಕರೆ ಸರಕಾರಿ ಭೂಮಿ ಇದ್ದರೂ ದಲಿತರಿಗೆ […]