ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ, ಮೇ 21: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ […]