ಜನ ಸಾಮಾನ್ಯರ ಸಮಸ್ಯೆಗಳ ಇತ್ಯರ್ಥಕ್ಕೆ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿರುವ ಅಹವಾಲುಗಳನ್ನು ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಶೀಘ್ರದಲ್ಲಿಯೇ ಸ್ಪಂದಿಸಿ, ಸಮಸ್ಯೆಗಳನ್ನು ನಿಯಮಾನುಸಾರ ಬಗೆಹರಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಮಂಗಳವಾರ ಕುಂದಾಪುರ ಶಾಸ್ರೀ ಸರ್ಕಲ್ ಬಳಿಯ ಆರ್.ಎನ್.ಶೆಟ್ಟಿ ಸಭಾಭವನ (ಬಂಟರ ಯಾನೆ ನಾಡವರ ಸಂಕೀರ್ಣ) ದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸ್ಪಂದನ ಕಾರ್ಯಕ್ರಮವನ್ನು ಕಳೆದ ವರ್ಷದಿಂದಲೇ ಆರಂಭಿಸಲಾಗಿದ್ದು, ಎಲ್ಲಾ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ […]