ಜೂ.4 ರಂದು ಉಡುಪಿ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ – ನಿಷೇಧಾಜ್ಞೆ ಜಾರಿ
ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನದ ಮತ ಎಣಿಕೆ ಕಾರ್ಯವು ಜೂನ್ 4 ರಂದು ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯವನ್ನು ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಮತ್ತು ಮತ ಎಣಿಕೆಯ ನಂತರ ಫಲಿತಾಂಶ ಪ್ರಕಟಣೆಗೊಂಡು, ಫಲಿತಾಂಶದ ಪ್ರಭಾವದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳು ಮತ್ತು ಬೆಂಬಲಿಗರು, ಗುಂಪು ಗುಂಪಾಗಿ ಸೇರಿ ಮೆರವಣಿಗೆ/ ವಿಜಯೋತ್ಸವಗಳನ್ನು ಆಚರಿಸಲು ಅವಕಾಶ ನೀಡಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಗಳಿರುವ ಹಿನ್ನೆಲೆ, […]