ಉಡುಪಿ ಜಿಲ್ಲೆ: ತಂಬಾಕು ಉತ್ಪನ್ನಗಳ ಮಾರಾಟ ಬಳಕೆಗೆ ಬ್ರೇಕ್, ಉಲ್ಲಂಘಿಸಿದಲ್ಲಿ ಕಾದಿದೆ ಕಠಿಣ ಶಿಕ್ಷೆ

ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಎನ್ನುವ ಉದ್ದೇಶದಿಂದ ಜಿಲ್ಲೆಯಲ್ಲಿ ತಂಬಾಕು ವಸ್ತುಗಳನ್ನು ನಿಷೇಧಿಸಲಾಗಿದೆ. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ […]