ಉಡುಪಿ: ಕೋವಿಡ್ ನಿಯಮ ಉಲ್ಲಂಘಿಸಿದ ನಾಲ್ಕು ಅಂಗಡಿಗಳಿಗೆ ತಲಾ ₹5 ಸಾವಿರ ದಂಡ ವಿಧಿಸಿದ ಡಿಸಿ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸ್ವತಃ ದಿಢೀರ್ ಆಗಿ ಕಾರ್ಯಾಚರಣೆಗೆ ಇಳಿದ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು, ಕೋವಿಡ್ ನಿಯಮ ಉಲ್ಲಂಘಿಸಿದ ನಗರದ ನಾಲ್ಕು ಅಂಗಡಿಗಳಿಗೆ ತಲಾ ₹5 ಸಾವಿರ ದಂಡ ವಿಧಿಸಿ ಬಿಸಿ ಮುಟ್ಟಿಸಿದರು. ಅಲ್ಲದೆ, ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆಕೊಟ್ಟರು. ಕೋವಿಡ್ ನಿಯಮಗಳನ್ನು ಜನರು ಸರಿಯಾಗಿ ಪಾಲಿಸಿದರೆ, ಯಾವುದೇ ಲಾಕ್ ಡೌನ್ ಮಾಡುವ ಅನಿವಾರ್ಯತೆ ಎದುರಾಗುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರ […]