ಉಡುಪಿ: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಡಿಸಿ ಕೂರ್ಮಾ ರಾವ್ ಆದೇಶ
ಉಡುಪಿ: ಕೋವಿಡ್ ಪಾಸಿಟಿವಿಟಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯದಂತೆ ಜಿಲ್ಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಸೆ. 27ರ ವರೆಗೆ ಮುಂದುವರಿಸಿ ಆದೇಶ ನೀಡಿದ್ದಾರೆ.