ರಾಮಮಂದಿರ ಭೂಮಿಪೂಜೆ ಹಿನ್ನೆಲೆ: ಉಡುಪಿ ಜಿಲ್ಲೆಯಾದ್ಯಂತ ಆ. 6ರ ವರೆಗೆ ಮದ್ಯ ಮಾರಾಟ ಬಂದ್

ಉಡುಪಿ: ರಾಮಮಂದಿರ ಭೂಮಿಪೂಜೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಆ. 6ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.  ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು. ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಭೆ, ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ ಇಡಿ […]