ಬಸ್ ನಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಕಾದಿದೆ ಶಿಕ್ಷೆ: ಉಡುಪಿ ಜಿಲ್ಲಾಧಿಕಾರಿ
ಉಡುಪಿ ಜೂನ್ 11: ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಬಸ್ ಗಳಲ್ಲಿ ನಿಗಧಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ ಗಳ ವಿರುದ್ದ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೋನಾ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಬಸ್ ಗಳಲ್ಲಿ ಸಾಮಾಜಿಕ ಅಂತರ […]