ನಕಲಿ ಟಿವಿ ಚಾನೆಲ್‍ಗಳ ವಿರುದ್ಧ ಕ್ರಮ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಹಾಗೂ ನಕಲಿ ಟಿವಿ ಚಾನೆಲ್‍ಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಬಲ್ ಟೆಲಿವಿಷನ್ ನೆಟ್‍ವರ್ಕ್ ಕಾಯಿದೆಯ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ( ಟ್ರಾಯ್) ಅಡಿ ಚಾನೆಲ್‍ಗಳು ನೋಂದಣಿಯಾಗಿರಬೇಕಿದೆ.  ಆದರೆ, ಇತ್ತೀಚೆಗೆ ಟಿವಿ ಚಾನೆಲ್‍ಗಳ ಹೆಸರಿನಲ್ಲಿ ಸರಕಾರಿ ಕಚೇರಿಗಳು ಸೇರಿದಂತೆ ಸಾರ್ವಜನಿಕರನ್ನು ಬ್ಲಾಕ್‍ಮೇಲ್ […]