ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಕಂಡು ಬಂದಲ್ಲಿ ಹೆಚ್ಚಿನ ದಂಡ ವಿಧಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಶಾಲೆ-ಕಾಲೇಜುಗಳ ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರುವ ಪ್ರಕರಣ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ,  ದಂಡ ವಿಧಿಸಿ,  ದಂಡ ವಿಧಿಸುವಲ್ಲಿ ಯಾವುದೇ ದಾಕ್ಷಿಣ್ಯ ತೋರಬೇಡಿ  ಎಂದು  ಜಿಲ್ಲಾ ತಂಬಾಕು ನಿಯಂತ್ರಣ ದಳದ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ತಂಬಾಕು ನಿಷೇಧ ಕೋಶದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸಮೀಪದ 100 […]