ಹೊರ ರಾಜ್ಯಗಳಿಗೆ ಪ್ರಯಾಣಿಕರನ್ನು ಕಳುಹಿಸಲು ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಿಸಿಲ್ಲ: ಜಿಲ್ಲಾಧಿಕಾರಿ
ಉಡುಪಿ ಮೇ 11: ಕೊರೋನಾ ಲಾಕ್ ಡೌನ್ ಸಮಸ್ಯೆಯಿಂದ, ಉಡುಪಿ ಜಿಲ್ಲೆಯಿಂದ ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗೆ ಅವರ ರಾಜ್ಯಗಳಿಗೆ ಕಳುಹಿಸಲು ವಾಹನ ಸಂಬoಧಿತ ವ್ಯವಸ್ಥೆ ಮಾಡಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ಸರ್ಕಾರ ಯಾವುದೇ ಖಾಸಗಿ ವ್ಯಕ್ತಿಗಳನ್ನು ನೇಮಕ ಮಾಡಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರಕಾರವು ಅಂತರ್ ರಾಜ್ಯ ಪ್ರಯಾಣಿಕರಿಗೆ ಸ್ವ ಊರಿಗೆ ಮರಳಲು ಸಹಾಯವಾಗುವಂತೆ ಸೇವಾ ಸಿಂಧು ಆ್ಯಪ್ ತಯಾರಿಸಿದ್ದು, ಇದರಲ್ಲಿ ಈಗಾಗಲೇ ಹಲವಾರು ಮಂದಿ ಈ ಅ್ಯಪ್ […]
ನಾಳೆಯಿಂದ ಉಡುಪಿಯಲ್ಲಿ ಲಾಕ್ ಡೌನ್ ಸಡಿಲಿಕೆ: ಬೆಳಗ್ಗೆ 7ರಿಂದ ಸಂಜೆ 7ವರೆಗೆ ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ
ಉಡುಪಿ: ಕೋವಿಡ್ 19 ಸಂಬಂಧಿಸಿ ಗ್ರೀನ್ ಝೋನ್ ನಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7ರಿಂದ ಸಂಜೆ 7 ರ ವರೆಗೆ ಅವಕಾಶ ನೀಡಲಾಗಿದೆ. ಅದರಂತೆ ಎಂಎಸ್ ಐಎಲ್ ಹಾಗೂ ವೈನ್ ಶಾಪ್ ಮಳಿಗೆಗಳಲ್ಲಿ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ಅನುಮತಿ ನೀಡಲಾಗಿದೆ. ಇಂದು ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9ರಿಂದ 1 ಗಂಟೆಯವರೆಗೆ ಅವಕಾಶ ನೀಡಲಾಗಿತ್ತು. […]
ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ವಿತರಣೆ: ಜಿಲ್ಲಾಧಿಕಾರಿ
ಉಡುಪಿ 18: ಜಿಲ್ಲೆಯಲ್ಲಿ ಈಗಾಗಲೇ ಹೊಸ ಆದ್ಯತಾ(ಬಿಪಿಎಲ್) ಮತ್ತು ಆದ್ಯತೇತರ(ಎಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ವಿಲೇವಾರಿಗೆ ಬಾಕಿ ಇರುವ ಅರ್ಜಿದಾರರ ಗಮನಕ್ಕೆ ತರುವುದೇನೆಂದರೆ, ಈ ಅರ್ಜಿಗಳಿಗೆ ಪಡಿತರ ಹಂಚಿಕೆಯಾಗಿದ್ದು ಅಂತಹ ಅರ್ಜಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಬಿಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 10 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು ಎಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 15-/- ರೂ ದರದಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದಾಗಿದೆ . […]
ಜಿಲ್ಲೆಯ ಹಾಪ್ ಕಾಮ್ಸ್ ಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರ ವರೆಗೆ ಹಣ್ಣು ಮತ್ತು ತರಕಾರಿ ಮಾರಾಟ: ಜಿಲ್ಲಾಧಿಕಾರಿ
ಉಡುಪಿ ಏಪ್ರಿಲ್ 8: ಪ್ರಸಕ್ತ ಕೊರೊನಾ ವೈರಾಣು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯೆಲ್ಲಿ ಮಾರ್ಚ್ 24 ರಿಂದ ದೇಶವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಿ ಕೇಂದ್ರ ಸರ್ಕಾರದಿಂದ ಆದೇಶಿಸಲಾಗಿದ್ದು, ಆದೇಶದಲ್ಲಿ ಕೆಲವೊಂದು ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತಿದೆ. ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯು ತೋಟಗಾರಿಕೆ ಇಲಾಖೆಯ ಒಂದು ಅಂಗ ಸಂಸ್ಥೆಯಾಗಿದ್ದು, ರೈತರಿಂದ ಹಣ್ಣು ಮತ್ತು ತರಕಾರಿಗಳನ್ನು ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದು, ರೈತರಿಂದ ಖರೀದಿಸಿದ ಹಣ್ಣು ಮತ್ತು ತರಕಾರಿಗಳನ್ನು ಮಾರಾಟ ಮಾಡಲು ಅನುವಾಗುವಂತೆ , ಉಡುಪಿ ಜಿಲ್ಲೆಯಲ್ಲಿನ, […]
ಆಹಾರ ಹಂಚುವಿಕೆಗೆ ಅನುಮತಿ ಅಗತ್ಯ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ ಏ.5: ಕೋವಿಡ್-2019 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ರಾಜ್ಯಾದ್ಯಂತ ಲಾಕ್‌ಡೌನ್ ಘೋಷಿಸಿದ್ದು, ಅದರಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಸೆಕ್ಷನ್ 144(3) ರಂತೆ ನಾಗರೀಕರ ಸಂಚಾರವನ್ನು ನಿರ್ಭಂಧಿಸಿ ಆದೇಶವನ್ನು ಹೊರಡಿಸಲಾಗಿದೆ. ಕೆಲವೊಂದು ವ್ಯಕ್ತಿಗಳು, ಸಂಸ್ಥೆಗಳು ನಗರಸಭೆ, ಪುರಸಭೆ, ಪಟ್ಪಣ ಪಂಚಾಯತ್, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತು ಅದರಿಂದ ಹೊರಗಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಯಾವುದೇ ಅನುಮತಿ ಪಡೆಯದೇ ತಯಾರಿಸಿದ ಆಹಾರ ಪೊಟ್ಟಣಗಳನ್ನು ಬೀದಿಯಲ್ಲಿ, ಮನೆ ಮನೆಗೆ ವಿತರಿಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ವಿತರಣೆ ಸಂಧರ್ಭದಲ್ಲಿ 5 ಕ್ಕಿಂತ […]