ಚುನಾವಣೆಯನ್ನು ಹಬ್ಬದಂತೆ ಆಚರಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಸಮಾನತೆ ಚಿಹ್ನೆ ಆಗಿರುವ ಮತದಾನವನ್ನು ಹಬ್ಬದಂತೆ ಆಚರಿಸಬೇಕು. ಮತದಾನದ ಜಾಗೃತಿಗಾಗಿ ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮತದಾರರಿಗೆ ಹೇಳಿದರು. ಅವರು ಶನಿವಾರ ಬ್ರಹ್ಮಗಿರಿಯ ಬಾಲಭವನದಲ್ಲಿ, ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಡೆದ ವಿಕಲಚೇತನ ಮತದಾರರಿಗೆ ಮತದಾನದ ಅರಿವು ಮೂಡಿಸುವ  ಕಾರ್ಯಕ್ರಮದಲ್ಲಿ ಮಾತನಾಡಿದರು.  ಹಿಂದಿನ ಚುನಾವಣೆಯಲ್ಲಿ ಮತ ಚಲಾಯಿಸದೆ ಹೊರಗುಳಿದಿರುವವರನ್ನು ಗುರುತಿಸಿ ಅವರಿಗೆ ಮನವರಿಕೆ ಮಾಡಿ ಈ ಬಾರಿ ಮತಚಲಾಯಿಸುವಂತೆ ಮತದಾನದ ಬಗ್ಗೆ […]