ವಾಹನಗಳ ಸುಗಮ ಸಂಚಾರಕ್ಕೆ ಆದ್ಯತೆ ನೀಡಿ ಅಪಘಾತ ಪ್ರಮಾಣ ತಗ್ಗಿಸಿ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, […]

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವುದು ಜನತಾ ದರ್ಶನದ ಉದ್ದೇಶ: ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಸೋಮವಾರ ಕಾಪು ಆಡಳಿತ ಸೌಧದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಇವರ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಮಾಡಲಾಗುತ್ತಿದೆ. ಜನರು ಸಲ್ಲಿಸಿದ ಅಹವಾಲುಗಳನ್ನು […]

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಶೀಘ್ರ ಚರ್ಚೆ : ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ […]

ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

ಬೈಂದೂರು: ಬೈಂದೂರು ತಾಲೂಕು ನಾವುಂದದಲ್ಲಿ ತೀವ್ರ ಮಳೆಯಿಂದ ನೆರೆ ಪೀಡಿತವಾಗಿರುವ ಪ್ರದೇಶ ಮತ್ತು ನಿರೋಡಿಯಲ್ಲಿ ಸೇತುವೆಗೆ ಹಾನಿಯಾದ ಪ್ರದೇಶ ಹಾಗೂ ಕುಂದಾಪುರದ ತೆಕ್ಕಟ್ಟೆಯಲ್ಲಿರುವ ಸೈಕ್ಲೋನ್ ಶೆಲ್ಟರ್‌ಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನೆರೆ ಬಾಧಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

ಎಪಿಎಂಸಿ ಜಾಗ ಮಾರಾಟ ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ವಲಸೆ ಕಾರ್ಮಿಕರ ಸಂಘ

ಉಡುಪಿ: ಆದಿ ಉಡುಪಿಯಲ್ಲಿರುವಂತಹ ಮಾರುಕಟ್ಟೆ ಕೃಷಿಕರು ಉತ್ಪಾದನೆ ಮಾಡಿದ ಬೆಳೆಗಳನ್ನು ಮಾರಾಟ ಮಾಡುವಂತಹ ಸ್ಥಳ. ಇದು ಸರಕಾರ ಮತ್ತು ಚುನಾಯಿತ ಜನಪ್ರತಿನಿಧಿಗಳ ಸಮಿತಿಯ ಮುಖಾಂತರ ಆಡಳಿತವಾಗುವಂತಹದ್ದು. ಇದುವರೆಗೂ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದ್ದು ಇತ್ತೀಚಿನ ದಿನಗಳಲ್ಲಿ ಅದನ್ನು ಲೀಸ್ ಕಮ್ ಸೇಲ್ ವ್ಯವಸ್ಥೆಯಡಿಯಲ್ಲಿ 4 ಸೆನ್ಸ್ ಜಾಗವನ್ನು 11 ಭಾಗಗಳಾಗಿ ಒಟ್ಟು 54 ಸೆನ್ಸ್ ಜಾಗ ಮಾರಾಟ ಮಾಡಿರುವ ಘಟನೆ ನಡೆದಿದ್ದು ತುಂಬಾ ಬೇಸರವಾಗಿದೆ. ಇದು ವರ್ತಕರಿಗೆ ಹಾಗೂ ಕೃಷಿಕರಿಗೆ ಮೀಸಲಿರುವ ಜಾಗ ಮುಂದಿನ ದಿನಗಳಲ್ಲಿ ಎಪಿಎಂಸಿಯ ಜಾಗ […]