ಲಿಂಗತ್ವ ಅಲ್ಪಸಂಖ್ಯಾತರಿಗೆ ಯಕ್ಷಗಾನ ಕೌಶಲ್ಯ ತರಬೇತಿ: ಉಡುಪಿ ಜಿಲ್ಲಾಡಳಿತದ ಮಾದರಿ ಕಾರ್ಯ

ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ ಇಷ್ಟವಿಲ್ಲದಿದ್ದರೂ ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪ ಸಂಖ್ಯಾತರು, ಕೌಶಲ್ಯಾಬಿವೃದ್ಧಿ ತರಬೇತಿಗಳನ್ನು ಪಡೆಯುವುದರ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಹಾಗೂ ಅತ್ಯುನ್ನತ ಸಾಧನೆ ಮಾಡಬಹುದಾಗಿದ್ದು ಇದಕ್ಕೆ ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿ ಕಾರ್ಯಕ್ರಮ ಆಯೋಜಿಸಿದೆ. ಉಡುಪಿ ಜಿಲ್ಲಾಡಳಿತದ ಜಿಲ್ಲಾ […]

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ನೇಮಕ

ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐ.ಎ.ಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಳ್ಳಾಲ ತಾಲೂಕಿನ ಹಾವೂರು ಗ್ರಾಮದ ವಿದ್ಯಾಕುಮಾರಿ 2014 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ಅವರನ್ನು ನೇಮಿಸಲಾಗಿದೆ. ಕೂರ್ಮಾ ರಾವ್ ಎಂ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.

ಹಿರ್ಗಾನ: ಆಗಸ್ಟ್ 20 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 20 ರಂದು ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಹಿರ್ಗಾನ ಗ್ರಾಮದ ಗ್ರಾಮಸ್ಥರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ರಾಷ್ಟ್ರಪ್ರೇಮ ಹಾಗೂ ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲೆಯ ನಾಗರಿಕರು ಪ್ರತೀ ಮನೆಯಲ್ಲೂ ಆಗಸ್ಟ್ 13 ರಿಂದ 15 ರ ವರೆಗೆ ತ್ರಿವರ್ಣ ಧ್ವಜವನ್ನು ಹಾರಿಸುವುದರೊಂದಿಗೆ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಭಿನಂದನೆ ಸಲ್ಲಿಸಿರುತ್ತಾರೆ. ಸಾರ್ವಜನಿಕರು ತಮ್ಮ ಮನೆಯಲ್ಲಿರುವ ರಾಷ್ಟ್ರಧ್ವಜವನ್ನು ಗೌರವಯುತವಾಗಿ ಸಂರಕ್ಷಣೆ ಮಾಡುವುದರೊಂದಿಗೆ ಧ್ವಜ ಸಂಹಿತೆಯನ್ನು ಕಾಪಾಡಬೇಕೆಂದು ತಿಳಿಸಿದ್ದಾರೆ.