ಉಡುಪಿ:ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲುಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, […]