ಜನ ನನ್ನನ್ನು ಬಂಡೆ ಎಂದು ಕರೆಯುತ್ತಾರೆ, ಹೀಗಾಗಿ ನೀವು ನನ್ನನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

ಉಡುಪಿ: ಧರ್ಮ, ಪೂಜೆ, ಭಕ್ತಿಗಳೆಲ್ಲವೂ ಪ್ರದರ್ಶನದ ವಸ್ತುಗಳಲ್ಲ. ಆಚಾರ-ವಿಚಾರಗಳನ್ನು ಎಲ್ಲರೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ನಾವು ಧರ್ಮವನ್ನು ಕಾಯಬೇಕು, ಧರ್ಮವನ್ನು ಉಳಿಸಬೇಕು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಇಂದು ಸಂಜೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಪರ್ಯಾಯ ಶ್ರೀಗಳಾದ ಶ್ರೀಸುಗುಣೇಂದ್ರತೀರ್ಥರ 64ನೇಯ ಜನ್ಮ ನಕ್ಷತ್ರೋತ್ಸವದ ಸಂಭ್ರಮ ಹಾಗೂ ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಜಗದ್ಗುರು ಶ್ರೀಮಧ್ವಾಚಾರ್ಯರ ಸ್ಮರಣಾರ್ಥ ಅಂಚೆ ಇಲಾಖೆ ಹೊರತಂದ ಅಂಚೆ ಚೀಟಿಯ ಬಿಡುಗಡೆ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಅವರು […]