ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಮಲ್ಪೆ ಸೀ ವಾಕ್ ಬಳಿಯ ಸಮುದ್ರದ ನೀರಿನಲ್ಲಿ ಡಿಸೆಂಬರ್ 17 ರಂದು ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-253799, ಮೊ.ನಂ: 9480805447 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.