ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು.
ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್‌ನಲ್ಲಿ ಉದ್ಯೋಗಿಯಾಗಿದ್ದರು. ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ 2 ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ […]