ಉಡುಪಿ: ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ; ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದನ್ನು ತಡೆಯುವುದು ಅವಶ್ಯವಕವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನಾನ್ಸ್ಗಳು/ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದನ್ನು ಜೂನ್ 6 ರವರೆಗೆ ನಿರ್ಬಂಧಿಸಲಾಗಿದೆ. ಯಾವುದೇ ಮೈಕ್ರೋಫೈನಾನ್ಸ್ಗಳು/ ಸಹಕಾರಿ ಸಂಘಗಳು/ ಇತರೆ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ […]