ಉಡುಪಿ ಓಡಿಎಫ್+ 1 ಜಿಲ್ಲೆಯಾಗಿ ಘೋಷಣೆ : ಡಾ. ನವೀನ್ ಭಟ್
ಉಡುಪಿ: ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ ಉಡುಪಿ ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಅವರು ಇಂದು ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]