ಉಡುಪಿ: ನ.17ರಿಂದ ಸಕಲ ಸುರಕ್ಷತಾ ಕ್ರಮಗಳೊಂದಿಗೆ ಪದವಿ ಕಾಲೇಜು ಶುರು: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ ಅಂತಿಮ ವರ್ಷದ ಪದವಿ ತರಗತಿಗಳನ್ನು, ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ,ಖಾಸಗಿ, ಅನುದಾನಿತ,ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು, ಪ್ರಮಾಣಿತ ಕಾರ್ಯಾಚರಣ ವಿಧಾನ ಮಾರ್ಗಸೂಚಿಯನ್ವಯ ಪ್ರಾರಂಭಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ತಮ್ಮ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ […]