ಉಡುಪಿ: ಜಿಲ್ಲಾ ಶಸ್ತ್ರ ಚಿಕಿತ್ಸಕರಿಗೆ ತೊಂದರೆ ನೀಡುವವರ ವಿರುದ್ದ ಕ್ರಮಕ್ಕೆ ಆಗ್ರಹ; ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ.

ಉಡುಪಿ: ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್ ಅಶೋಕ್ ಅವರಿಗೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಅನಗತ್ಯ ತೊಂದರೆ ನೀಡುತ್ತಿರುವ ಕುರಿತು ಸಾರ್ವಜನಿಕ ಹಿತರಕ್ಷಣಾ ವೇದಿಕೆ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಡಾಕ್ಟರ್ ಎಚ್. ಅಶೋಕ್ ಕಳೆದ ಒಂದು ವರ್ಷ ಐದು ತಿಂಗಳಿನಿಂದ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಜನಾನುರಾಗಿಯಾಗಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಜನ ಸೇವೆಯನ್ನು ನೀಡುತ್ತಾ ಬಂದಿದ್ದು ಆಸ್ಪತ್ರೆಯಲ್ಲಿ ಹಲವಾರು ವರ್ಷಗಳಿಂದ ಕೆಲವೊಂದು ವೈದ್ಯರು ಇಲ್ಲೇ ಸೇವೆ ಸಲ್ಲಿಸುತ್ತಿದ್ದು ಬಡ ರೋಗಿಗಳಿಗೆ ಸ್ಪಂದಿಸುತ್ತಿಲ್ಲ […]