ಡಿ.ದೇವರಾಜ ಅರಸು ಅವರ ವಿಚಾರಧಾರೆಗಳನ್ನು ಯುವಜನತೆ ಅಳವಡಿಸಿಕೊಳ್ಳಿ : ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ: ರಾಜ್ಯ ಕಂಡ ಅನುಭವಿ ಪ್ರಾಮಾಣಿಕರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಕ್ರಾಂತಿಕಾರಿ ನಾಯಕರಾಗಿ ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾಗಿ ರಾಜ್ಯದಲ್ಲಿ ಮಹತ್ವದ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ಅವರ ವಿಚಾರಧಾರೆಗಳನ್ನು ಯುವಪೀಳಿಗೆ ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣಹೇಳಿದರು. ಅವರು ಮಂಗಳವಾರ ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತಆಶ್ರಯದಲ್ಲಿ […]