ಧರ್ಮಸ್ಥಳ: ನ.26 ರಿಂದ ಡಿ.1 ರವರೆಗೆ ಧರ್ಮಸ್ಥಳ ಕ್ಷೇತ್ರದಲ್ಲಿ ಅದ್ದೂರಿ ಲಕ್ಷದೀಪೋತ್ಸವ ಆಚರಣೆ
ಧರ್ಮಸ್ಥಳ: ಕಾರ್ತಿಕ ಮಾಸದಲ್ಲಿ ಧರ್ಮಸ್ಥಳದಲ್ಲಿ ಜರುಗುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಈ ವರ್ಷ ನ.26 ರಿಂದ ಡಿ.1 ರವರೆಗೆ ಅದ್ದೂರಿಯಾಗಿ ನಡೆಯಲಿದೆ. ನ.26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರುಕಟ್ಟೆ ಉತ್ಸವ, 30ರಂದು ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ), ಡಿ.1ರಂದು ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನಡೆಯಲಿದೆ. ನ.26ರಂದು ಮಧ್ಯಾಹ್ನ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ 25,000ಕ್ಕೂ ಹೆಚ್ಚು ಭಕ್ತರು ಮತ್ತು ಅಭಿಮಾನಿಗಳು ಪಾದಯಾತ್ರೆಯಲ್ಲಿ ಪ್ರಾರ್ಥನೆ, ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಆಗಮಿಸಲಿದ್ದಾರೆ. […]