ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಉಗ್ರಂ ಮಂಜು’; ಧರ್ಮಸ್ಥಳದಲ್ಲಿ ನಡೆಯಿತು ಸರಳ ವಿವಾಹ!

ಮಂಗಳೂರು: ಕನ್ನಡದ ಜನಪ್ರಿಯ ಪೋಷಕ ನಟ, ಮಾಜಿ ಬಿಗ್ಬಾಸ್ ಕನ್ನಡ ಸ್ಪರ್ಧಿ ಆಗಿರುವ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಜ.23ರಂದು ಕಾಲಿಟ್ಟಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ಗುರು, ಹಿರಿಯ ಆಶೀರ್ವಾದದೊಂದಿಗೆ, ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ಮದುವೆ ಕಾರ್ಯಕ್ರಮ ನಡೆದಿದ್ದು, ಕುಟುಂಬಸ್ಥರು, ಆಪ್ತರು ಭಾಗಿಯಾಗಿದ್ದರು. ನಿನ್ನೆ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿತ್ತು. ಮನೆಯಲ್ಲಿಯೇ ನಡೆದ ಈ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರು, ಆಪ್ತರು ಹಾಗೂ ಆತ್ಮೀಯ ಗೆಳೆಯರು ಮಾತ್ರ ಭಾಗವಹಿಸಿದ್ದರು. ಹಳದಿ ಶಾಸ್ತ್ರದ ಫೋಟೋಗಳು […]