ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನ 2022ನೇ ಸಾಲಿನ ಡೈರಿ ಬಿಡುಗಡೆ ಸಮಾರಂಭ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ಇದರ 2022ನೇ ಸಾಲಿನ ಡೈರಿಯನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಯಶ್‌ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಗ್ರಾಹಕಸ್ನೇಹಿ ಸೇವೆಯ ಮೂಲಕ ಕರಾವಳಿ ಕರ್ನಾಟಕದ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ರಾಜ್ಯದಲ್ಲಿರುವ 70 ಲಕ್ಷ ಮೀನುಗಾರ ಸಮುದಾಯಕ್ಕೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸುವ […]