ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ವೈದ್ಯರು/ ತಜ್ಞರ-10 ಹುದ್ದೆಗೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್/ ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪದವಿ ಆಗಿರಬೇಕು) […]