ಭೂಕುಸಿತದಂತಹ ದುರಂತಕ್ಕೆ ಪರಿಸರದ ಮೇಲಿನ ನಿರಂತರ ದಾಳಿಯೇ ಕಾರಣ

ಉಡುಪಿ: ಪ್ಲ್ಯಾಸ್ಟಿಕ್ ಬಳಕೆಯಿಂದ ಜನರ ಆರೋಗ್ಯ ಹಾಗೂ ಪರಿಸರದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುತ್ತಿವೆ. ಹೀಗಾಗಿ ಮರುಬಳಕೆಗೆ ಯೋಗ್ಯವಾದ ಪ್ಲ್ಯಾಸ್ಟಿಕ್ ಅನ್ನು ಮಾತ್ರ ಬಳಸಬೇಕು. ಏಕಬಳಕೆಯ ಪ್ಲ್ಯಾಸ್ಟಿಕ್ ಅನ್ನು ಬಳಸಬಾರದು. ಪರಿಸರ ಸಂರಕ್ಷಣೆ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಡಳಿತ, ಜಿಪಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ […]