ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಲಭ್ಯ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವುಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು ೭೦೪ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ. ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ಪ್ರಸಕ್ತ […]