ಉಡುಪಿ ಜಿಲ್ಲೆ: 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ
ಉಡುಪಿ: ಜಿಲ್ಲೆಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಪಡೆದಿರುವ 258 ಕೋಟಿ ರೂ. ಗಳ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭಗೊಂಡಿದ್ದು, ಈಗಾಗಲೇ ಕಾರ್ಕಳ ತಾಲೂಕಿನ 15 ರೈತರು ಪ್ರಯೋಜನ ಪಡೆದಿದ್ದಾರೆ. ರೈತರು ತಮ್ಮ ಹೆಸರುಗಳನ್ನು ನೊಂದಾಯಿಸಲು ಇಂದಿನಿಂದ 2019 ರ ಜನವರಿ 10 ರ ವರೆಗೆ ಕಾಲಾವಕಾಶ ಇದೆ ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಯೋಜನೆಯ […]