ಡಿ. 1 ರಿಂದ ಜಿಲ್ಲೆಯ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಡಿಸೆಂಬರ್ 1 ರಿಂದ ದೇಶದಾದ್ಯಂತ  ರಾಷ್ಟ್ರೀಯ ಹೆದ್ದಾರಿಗಳ ಎಲ್ಲಾ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು,  ದ್ವಿಚಕ್ರ ವಾಹನ ಮತ್ತು ಆಟೋಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗಳಲ್ಲಿ ಸಹ […]