ಕೇಂದ್ರ, ರಾಜ್ಯ ಸರ್ಕಾರದಿಂದ ಜಿಲ್ಲೆಯ ಸಂಪೂರ್ಣ ನಿರ್ಲಕ್ಷ್ಯ: ಆರೋಪ

ಉಡುಪಿ: ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಅನುದಾನ ಹಂಚಿಕೆ, ಅಭಿವೃದ್ಧಿ ಕಾಮಗಾರಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಎರಡು ಸರ್ಕಾರಗಳು ಜಿಲ್ಲೆಗೆ ಅನ್ಯಾಯ ಮಾಡುತ್ತಿವೆ ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್‌ ಪೂಜಾರಿ ಸಾಲಿಗ್ರಾಮ ಆರೋಪಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಿಲ್ಲೆಯ ಮರಳು ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದು, […]

ಶಾಸಕ ರಘುಪತಿ ಭಟ್ ಅವರಿಂದ ಕರ್ಜೆ ಗ್ರಾಮಸ್ಥರಿಗೆ ಸಿಹಿಸುದ್ಧಿ: ಕಿಂಡಿ ಅಣೆಕಟ್ಟು ಕಾಮಗಾರಿಗೆ ಚಾಲನೆ

ಉಡುಪಿ ಜಿಲ್ಲೆಯ ಹಲುವಳ್ಳಿ ಎಂಬ ಗ್ರಾಮದ  ಆಲಡ್ಕದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಸದ್ಯ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಮುಂದಾಗಿದ್ದಾರೆ. ಈ ಭಾಗದ ಜನರಿಗೆ ನೀರಿನ ಅಗತ್ಯತೆಗಳನ್ನು ಪೂರೈಸಲು ಈ ಹಿಂದೆ ಗ್ರಾಮಸ್ಥರು ಅನೇಕ ಬಾರಿ ಮನವಿ ಮಾಡಿದ್ದರೂ ಕೂಡ ಈ‌ ಹಿಂದಿನ ಜನಪ್ರತಿನಿಧಿಗಳು ಇದಕ್ಕೆ ಸೊಪ್ಪು ಹಾಕಿರಲಿಲ್ಲ, ಆದರೆ ಈಗ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಸುಮಾರು 4.25 ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಕಾರ್ಯಕ್ಕೆ ರಘುಪತಿ ಭಟ್ ಅವರು […]

ನಿಶಾ ಜೇಮ್ಸ್ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕಾರ

ಉಡುಪಿ: ಜಿಲ್ಲೆಯ ನೂತನ ಎಸ್ ಪಿ ಆಗಿ ನಿಶಾ ಜೇಮ್ಸ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಉಡುಪಿ ಎಸ್ಪಿ ಕಚೇರಿಯಲ್ಲಿ ಶನಿವಾರ ನೂತನ ಎಸ್ಪಿ ನಿಶಾ ಜೇಮ್ಸ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಆ ನಂತರ ಮಾತನಾಡಿದ ನೂತನ ಎಸ್ಪಿ ನಿಶಾ ಜೇಮ್ಸ್, ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಅಕ್ರಮ ಚಟುವಟಿಕೆ, ಕೋಮು ಸಂಘರ್ಷ, ರೌಡಿಸಂಗಳ ವಿರುದ್ಧ ನಿಷ್ಪಕ್ಷವಾಗಿ ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು. ಮಹಿಳೆಯರಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅದಕ್ಕಾಗಿ […]

ದ್ವಿತೀಯ ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 15410 ವಿದ್ಯಾರ್ಥಿಗಳು

ಉಡುಪಿ: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 15410 ಮಂದಿ ಹಾಜರಾಗಲಿದ್ದಾರೆ. ಮಾರ್ಚ್ 1 ರಿಂದ 18 ರ ವರೆಗೆ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಪೂರ್ವ ಸಿದ್ದತಾ ಸಭೆ ಮಂಗಳವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಗೆ ಮಾಹಿತಿ ನೀಡಿದ ಪದವಿ ಪೂರ್ವ ಶಿಕ್ಷಣಾ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ, ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಿವೆ. ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು 8 ರೂಟ್ ತಂಡಗಳನ್ನು […]

ಭಾರತ್ ಬಂದ್: ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹತ್ತಕ್ಕೂ ಅಧಿಕ ಕೇಂದ್ರ ಕಾರ್ಮಿಕ ಒಕ್ಕೂಟಗಳು ಜ. 8 ಮತ್ತು 9 ರಂದು ಎರಡು ದಿನಗಳ ಕಾಲ ಕರೆ ನೀಡಿರುವ ಭಾರತ್ ಬಂದ್’ಗೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆ ಇದ್ದು, ಜನಸಾಮಾನ್ಯರ ಮೇಲೆ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ.   ಸಿಟಿ ಬಸ್ ಹಾಗೂ ಸರ್ವಿಸ್ ಬಸ್ ಗಳ ನೌಕರರ ಸಂಘ ಈಗಾಗಲೇ ಬಂದ್ ಗೆ ಬೆಂಬಲ ಸೂಚಿಸಿರುವುದರಿಂದ ನಾಳೆ ಹಾಗೂ ನಾಡಿದ್ದು ಖಾಸಗಿ ಬಸ್ […]