ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನೂತನ ಸಚಿವರಿಗೆ ಅಭಿನಂದನೆ

ಉಡುಪಿ: ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿಕೊಂಡು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಅಭಿವೃದ್ಧಿಯ ಪರ್ವವನ್ನು ಆರಂಭಿಸಲಾಗುವುದು ಎಂದು ನೂತನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮುಖ್ಯಮಂತ್ರಿ ನೀಡುವ ಯಾವುದೇ ಖಾತೆಯನ್ನು ಪ್ರಾಮಾಣಿಕವಾಗಿ ನಿಭಾಯಿಸಲಾಗುವುದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಒಂದಾಗಿ ಒಟ್ಟಾಗಿ ನಮ್ಮಲ್ಲಿರುವ ಎಲ್ಲ ಅಧಿಕಾರ ಮತ್ತು ಹೊಣೆಗಾರಿಕೆಯನ್ನು ಜಿಲ್ಲೆಯ ಅಭಿವೃದ್ಧಿಗೆ ಬಳಸಿಕೊಳ್ಳಬೇಕಾಗಿದೆ ಎಂದು […]