ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವಾರ್ಷಿಕ ಮಹಾಸಭೆ

ಉಡುಪಿ: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಅಜ್ಜರಕಾಡಿನ ಪುರಭವನದಲ್ಲಿ ಮಂಗಳವಾರ ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ತೊಂದರೆ ಎದುರಾದರೆ ಅದನ್ನು ಜನಪ್ರತಿನಿಧಿಗಳ ಮೂಲಕ ಸರಿಪಡಿಸಲಾಗುವುದು. ಇದಕ್ಕೆ ಯಾವುದೇ ಸ್ಪಂದನೆ ದೊರೆಯದಿದ್ದರೆ ನ್ಯಾಯಾಲಯದ ಮೂಲಕ ಕಾನೂನು ಹೋರಾಟ ಮಾಡಲಾಗುವುದು. ಜಿಲ್ಲೆಯಲ್ಲಿ 2.60 ಲಕ್ಷ ರೂ. ಶಿಕ್ಷಣ ನಿಧಿಯನ್ನು ಮಹಾಮಂಡಳಕ್ಕೆ ನೀಡಲಾಗಿದೆ ಎಂದರು. ಸಹಕಾರಿ ಯೂನಿಯನ್ ನಿರ್ದೇಶಕರು, ಶಾಸಕ […]