ಉಡುಪಿ: ಮಾ.6ಕ್ಕೆ ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ಜಿಲ್ಲಾ ರೈತ ಸಮಾವೇಶ

ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ಜಿಲ್ಲಾ ರೈತ ಸಮಾವೇಶ -2022 ಮಾ.6ರಂದು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದ್ದಾರೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಅಂದು ಬೆಳಿಗ್ಗೆ 10.15ಕ್ಕೆ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ರಘುಪತಿ […]