ಉಡುಪಿ: ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ಫೀವರ್ ಸರ್ವೆ; ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ನಿಯಂತ್ರಿಸಲು ಶೀಘ್ರದಲ್ಲಿ ಕೋವಿಡ್ ಪೀಡಿತರನ್ನು ಪತ್ತೆ ಹಚ್ಚಿ, ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಫೀವರ್ ಸರ್ವೇ ಕಾರ್ಯಕ್ರಮ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೆಪ್ಟೆಂಬರ್ 20 ರಿಂದ 22 ರ ವರೆಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಎಲ್ಲಾ ಗ್ರಾಮೀಣ ಮತ್ತು […]